ಶಿರಸಿ ಜಾತ್ರೆ ನಿಮಿತ್ತ ಬಸ್ ವ್ಯವಸ್ಥೆ, ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಶಿರಸಿ   : ಮಾ. ೧೫ ರಿಂದ ೨೩ ರ ವರೆಗೆ ಶಿರಸಿಯಲ್ಲಿ ಜರುಗುವ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ನಿಮಿತ್ತ  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರಿಗೆ ವ್ಯವಸ್ಥೆಯನ್ನು ಮಾಡಿದೆ.
ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ ಜಾತ್ರಾ ಅಂಗಡಿ ಮುಂಗಟ್ಟು ಹಾಕುವುದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗುವುದರಿಂದ ಮಾ. ೧೪ ಬೆಳಿಗ್ಗೆ ಹಳೆ ಬಸ್ ನಿಲ್ದಾಣದ ಸಾರಿಗೆಗಳ ಕಾರ್ಯಾಚರಣೆಗಳನ್ನು ಹೊಸ ಬಸ್ ನಿಲ್ದಾಣದಿಂದ ಮಾಡಲಾಗುವುದು. ಮಾರಿಕಾಂಬಾ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲು ಹೆಚ್ಚುವರಿಯಾಗಿ ಶಿರಸಿಯಿಂದ ಹಾನಗಲ್, ಹಾವೇರಿ, ಹುಬ್ಬಳ್ಳಿ, ಗದಗ, ಲಕ್ಷ್ಮೇಶ್ವರ, ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರ, ಗಂಗೋಳ್ಳಿ, ತ್ರಾಸಿ, ಕುಂದಾಪುರ, ಯಲ್ಲಾಪುರ, ದಾಂಡೇಲಿ, ಅಂಕೋಲಾ, ಕಾರವಾರ ಮತ್ತು ಪ್ರಮುಖ ಊರುಗಳಿಂದ ಸಾರಿಗೆಗಳನ್ನು ಕಾರ್ಯಾಚರಿಸಲಾಗುವುದು.
ಜಾತ್ರೆಯ ದಿನಗಳಲ್ಲಿ ಹಾನಗಲ್, ಹಾವೇರಿ, ಹುಬ್ಬಳ್ಳಿ ಕಡೆಗೆ ಹೋಗುವ ಸಾರಿಗೆಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಅಶ್ವಿನಿ ಸರ್ಕಲ್, ಎಪಿಎಂಸಿ ಶಿರಸಿ ಘಟಕ, ವಿವೇಕಾನಂದ ಕ್ರಾಸ್, ಚಿಪಗಿ ಸರ್ಕಲ್ ಮಾರ್ಗವಾಗಿ ಸಂಚರಿಸುತ್ತದೆ. ಶಿರಸಿ ಮಾರಿಕಾಂಬಾ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಬಸ್ ಸಂಚಾರಕ್ಕೆ ನಿಷೇದಿಸಿರುವುದರಿಂದ ಬನವಾಸಿ ಮಾರ್ಗದ ಸಾರಿಗೆಗಳನ್ನು ರಾಮನಬೈಲ್ ಕ್ರಾಸನಿಂದ ಕಾರ್ಯಾಚರಣೆ ಮಾಡಲಾಗುವುದು. ಸಿದ್ದಾಪುರ , ಸಾಗರ, ಕುಮಟಾ, ಹೊನ್ನಾವರ , ಬೈಂದೂರು, ಕುಂದಾಪುರ ಸಾರಿಗೆಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಪದ್ಮಶ್ರೀ ಸರ್ಕಲ್, ಹನುಮಾನ ವ್ಯಾಯಾಮ ಶಾಲೆ, ಐದು ರಸ್ತೆ ಸರ್ಕಲ್ ಮುಖಾಂತರ ಸಂಚರಿಸುತ್ತದೆ.
ಶಿರಸಿಯಿಂದ ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಭಾಗಕ್ಕೆ ಹೋಗುವ ಪ್ರಯಾಣಿಕರು ಶಿರಸಿ ಹೊಸ ಬಸ್ ನಿಲ್ದಾಣ ಅಥವಾ ಹನುಮಾನ ವ್ಯಾಯಾಮ ಶಾಲೆ ಆವರಣ ಬಸ್ ತಂಗುದಾಣದಿಂದ ಪ್ರಯಾಣಿಸಬಹುದಾಗಿದೆ. ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಭಾಗದಿಂದ ಶಿರಸಿಗೆ ಬರುವ ಪ್ರಯಾಣಿಕರಿಗೆ ರಾಯಪ್ಪಾ ಹುಲೇಕಲ್ ಶಾಲೆಯ ಕಂಪೌಂಡದಲ್ಲಿ ಇಳಿಯುವ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಅಶ್ವಿನಿ ಸರ್ಕಲ್, ರಾಮನಬೈಲ್ ಕ್ರಾಸ್, ಎಪಿಎಂಸಿ ಕ್ರಾಸ್ ಹುಬ್ಬಳ್ಳಿ, ಹನುಮಾನ ವ್ಯಾಮ ಶಾಲೆ ಆವರಣ ಮತ್ತು ರಾಯಪ್ಪಾ ಹುಲೇಕಲ್ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂಗುದಾಣಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಶಿರಸಿ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೇಟ್ ವಿತರಿಸಲು ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೭೭೬೦೯೯೧೭೨೫, ೭೭೬೦೯೯೧೭೦೨, ೭೭೬೦೯೯೧೭೧೩, ೭೭೬೦೯೯೧೭೧೨ ಮತ್ತು ೦೮೩೪೪ ೨೨೯೯೫೨ ಗೆ ಸಂಪರ್ಕಿಸಿ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದೇ ವರ್ಷದಲ್ಲಿ ಎರಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ! ಇದು ಹೇಗೆ ಸಾಧ್ಯವಾಯ್ತು ?

 

 

.

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button