
ಪ್ರಗತಿವಾಹಿನಿ ಸುದ್ದಿ: ಆಟೋ ರಿಕ್ಷಾ ಹಾಗೂ ಕೆ.ಎಸ್.ಆರ್. ಟಿ.ಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ತಲಪಾಡಿ ಟೋಲ್ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.