Kannada NewsKarnataka NewsLatest
*ಬಸ್ ಹಾಗೂ ಕಾರು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಬೆಳಧರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಖಾಸಗಿ ಬಸ್ ಚಾಲಕ ಸ್ಥಳದಿಂದ ಪರಾರುಯಾಗಿದ್ದಾನೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




