Kannada NewsKarnataka NewsLatest
*ಅಥಣಿಯಿಂದ ಹೊರಟಿದ್ದ ಬಸ್ ಹಾಗೂ ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಪ್ರವೀಣ್ (36), ವಿಜಯ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ತೆರಳುತ್ತಿತ್ತು. ಈ ವೇಳೆ ಕುಮಾರಪಟ್ತಣಂ ಬಳಿ ಕಾರಿಗೆ ಡಿಕ್ಕಿಯಾಗಿದೆ.