
ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಗೆ ಕಾರು ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ.
ಹರ್ಲಾಪುರ ಗ್ರಾಮದಲ್ಲಿ ಎನ್ ಹೆಚ್ 63ರಲ್ಲಿ ಈ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಬಳಿಕ ಗೋವಾ ಸಾರಿಗೆ ಬಸ್ ಗೆ ಗುದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



