Karnataka News

*ಬಸ್-ಕಾರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂಟರದ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾ ಬಳಿ ಈ ಅಪಘಾತ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಬಸ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುನೀಲ್ ಹಾಗೂ ದಿವ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button