ಪ್ರಗತಿವಾಹಿನಿ ಸುದ್ದಿ; ಉಡುಪಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಗರಾಜು (40), ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಕಾರಿನಲ್ಲಿದ್ದ ಕುಟುಂಬದವರು ಧರ್ಮಸ್ಥಳದಿಂದ ಶೃಂಗೇರಿಗೆ ಬರುತ್ತಿದ್ದರು. ಈ ವೇಳೆ ನೆಲ್ಲಿಕಾರು ಬಳಿ ಕಾಅರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://pragati.taskdun.com/karnataka-maharashtra-border-issuekollapura144-section/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ