ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ವೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ನುಗ್ಗಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಶನಿವಾರ ರಾತ್ರಿ ವೆರ್ನಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಗುಡಿಸಲುಗಳಲ್ಲಿ ಮಲಗಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಘಟನೆಯ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ. ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ರೂಪೇಂದರ್ ಕುಮಾರ್ ಎಂಬುವವರು, ಚಾಲಕ ಮದ್ಯದ ಅಮಲಿನಲ್ಲಿದ್ದನು ಎಂದಿದ್ದಾರೆ. ಈ ಅಪಘಾತದಲ್ಲಿ ರೂಪೇಂದರ್ ಕುಮಾರ್ ಅವರ ಚಿಕ್ಕಪ್ಪ ರಮೇಶ್ ಮಾಥುರ್ ಮತ್ತು ಸಹೋದರ ಅನಿಲ್ ಮಾಥುರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ