
ಪ್ರಗತಿವಾಹಿನಿ ಸುದ್ದಿ : ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು ಮೂವರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ತುಮಕೂರಿನ ಚಿಕ್ಕನಹಳ್ಳಿಯ ಬಳಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಸನ್ ರೈಸ್ ಟೂರ್ಸ್ ಅಂಡ್ ಟ್ರಾವೆಲ್ಸ್ ನ ಬಸ್ ಗೋವಾ- ಬೆಂಗಳೂರು ನಡುವೆ ಸಂಚರಿಸುತ್ತಿತ್ತು. ಚಿಕ್ಕನಹಳ್ಳಿ ಬಳಿ ನಿರ್ಮಿಸಲಾಗಿದ್ದ ನೂತನ ಫೈಓವರ್ ಮೇಲೆ ಈ ಘಟನೆ ನಡೆದಿದ್ದು ಬೇರೆ 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತ ಮಹಿಳೆಯರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು ಮುಂಜಾನೆ 4.15 ಕ್ಕೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 29 ಮಂದಿ ಪ್ರಯಾಣಿಕರಿದ್ದು ಇಬ್ಬರನ್ನು ಕಳ್ಳಂಬೆಳ್ಳ ಆಸ್ಪತ್ರೆಗೆ ಹಾಗೂ ಉಳಿದ ಗಾಯಾಳಗಳನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್‌ಪಿ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
 
					 
				 
					 
					 
					 
					
 
					 
					 
					


