Kannada NewsKarnataka NewsNational

*ಕಂದಕಕ್ಕೆ ಉರಳಿದ ಬಸ್: 21 ಯಾತ್ರಿಕರ ಸಾವು*

ಪ್ರಗತಿವಾಹಿನಿ ಸುದ್ದಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸು ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿದ ಪರಿಣಾಮ  21 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.‌ ಇನ್ನು ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆಗಳಿವೆ ಎಂದು ವರದಿಯಾಗಿದೆ

ಜಮ್ಮುವಿನ ಪೂಂಚ್ ಜಿಲ್ಲೆಯ ಚೋಕಿ ಚೋರಾ ಬೆಲ್ಟ್ನ ಜಮ್ಮು-ಪೂಂಚ್ ಹೆದ್ದಾರಿ ತಂಗ್ಲಿ ಮೋರ್ಹ್ ಬಳಿ ಗುರುವಾರ ಈ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಹತ್ರಾಸ್ನಿಂದ ನಿಂದ ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸುಮಾರು 150 ಅಡಿ ಎತ್ತರದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 21 ಜನ ಸಾವನ್ನಪ್ಪಿದ್ದಾರೆ. 

ಪೊಲೀಸರು ಮತ್ತು ಸ್ಥಳೀಯರನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಗಾಯಗೊಂಡವರನ್ನು ಜಮ್ಮುವಿನ ಅನ್ನೂರ್ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು (ಜಿಎಂಸಿ) ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.‌

Home add -Advt

Related Articles

Back to top button