Kannada NewsLatestNational

*ಕಂದಕಕ್ಕೆ ಉರುಳಿದ ಬಸ್: 10 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಚಿಂತೂರು-ಮರೆಡುಮಿಲ್ಲಿ ಘಾಟ್ ರಸ್ತೆಯ ರಾಜುಗರಿಮೆಟ್ಟ ಬಳಿ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿ 10 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತ ನಡೆಯುತ್ತಿದ್ದಂತೆ ಚಿಂತೂರಿನ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕಠಿಣ ಭೂಪ್ರದೇಶ ಮತ್ತು ಕಳಪೆ ಮೊಬೈಲ್ ನೆಟ್ವರ್ಕ್ ಸಮಸ್ಯೆ ಕಾರ್ಯಚರಣೆಗೆ ಅಡ್ಡಿಯಾಗಿದೆ ಎಂದು ತಿಳಿಸಿದು ಬಂದಿದೆ.‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಭದ್ರಾಚಲಂ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

Related Articles

Back to top button