*ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್: ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ಗಾಜನೂರು ಅಗ್ರಹಾರ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಪ್ರಯಾಣಿಕ ಹರ್ಷಿತ್ (35) ಮೃತರು. 13ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. Home add … Continue reading *ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್: ಇಬ್ಬರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed