
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನ 11 ವರ್ಷದ ಬಾಲಕಿ ಅರ್ನವಿ ಹಾಗೂ 20 ವರ್ಷದ ಯಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 5 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ತಮಿಳುನಾಡು ಕಡೆ ಹೊರಟಿತ್ತು. ಬಸ್ನಲ್ಲಿ ಒಟ್ಟು 36 ಜನ ಪಯಣಿಸುತ್ತಿದ್ದರು.