Belagavi NewsBelgaum NewsLatest
*ಮುಂದೆ ಹೊರಟಿದ್ದ ಬಸ್‌ಗೆ ಹಿಂದಿನಿಂದ ಗುದ್ದಿದ ಮತ್ತೊಂದು ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ನಗರದಲ್ಲಿ ಎರಡು ಸರ್ಕಾರಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೈಲಹೊಂಗಲದಿಂದ ಬೇವಿನಕೊಪ್ಪದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ, ಮುಂದೆ ಸಾಗುತ್ತಿದ್ದ ಮತ್ತೊಂದು ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ವಿದ್ಯಾರ್ಥಿಗಳೂ ಇದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


