Karnataka News

*ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನಲ್ಲಿ ಪೀಣ್ಯದ ಎನ್.ಟಿ.ಟಿ.ಎಫ್ ಮುಖ್ಯ ರಸ್ತೆ ಬಳಿ ನಡೆದಿದೆ.

ಹಿಮಾಂಶು (28) ಮೃತ ಕಾರ್ಮಿಕ. ಇನ್ನೋರ್ವನ ಹೆಸರು ತಿಳಿದುಬಂದಿಲ್ಲ. ಕಟ್ಟಡ ನಿರ್ಮಾಣದ ವೇಳೆ ಸೆಂಟ್ರಿಂಗ್ ಏಕಾಏಕಿ ಕುಸಿದು ಬಿದ್ದು, ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಇನ್ನೋರ್ವ ಕಾರ್ಮಿಕ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಓರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Related Articles

Back to top button