
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಹಿನ್ನೆಲೆಯಲ್ಲಿ ಸುಮಾರು 6 ತಿಂಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ -ಮಹಾರಾಷ್ಟ್ರ ಬಸ್ ಸಂಚಾರ ಮಂಗಳವಾರ ಪುನಾರಂಭವಾಗಲಿದೆ.
ಬೆಳಗಾವಿ ನಗರ, ಚಿಕ್ಕೋಡಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಮಹಾರಾಷ್ಟ್ರದ ವಿವಿಧ ಭಾಗಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಬೆಳಗಾವಿ ಮತ್ತು ಚಿಕ್ಕೋಡಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಸ್ ಸಂಚಾರ ಸ್ಥಗಿತವಾಗುವ ಮುನ್ನ ಇದ್ದ ವೇಳಾಪಟ್ಟಿಯಂತೆಯೇ ಬಸ್ ಸಂಚಾರ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.