
ಪ್ರಗತಿವಾಹಿನಿ ಸುದ್ದಿ: ಬಸ್ ಬರುವುದನ್ನು ಗಮನಿಸದೇ ರಸ್ತೆ ದಾಟುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ನಲ್ಲಿ ಈ ದುರಂತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿಯೇ ಮನೆಯಿದ್ದು, ಮಗು ಮನೆಯಂಗದಲ್ಲಿ ಆಟವಾದುತ್ತಿತ್ತು. ಇದ್ದಕ್ಕಿದ್ದಂತೆ ಬಾಲಕಿ ರಸ್ತೆ ದಾಟಲು ಮುಂದಾಗಿದೆ. ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ದಿವ್ಯಾಶ್ರೀ (4) ಮೃತ ಕಂದಮ್ಮ. ಗೂಗಲ್ ನಿಂದ ದೇವದುರ್ಗಕ್ಕೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

