ಪ್ರಗತಿವಾಹಿನಿ ಸುದ್ದಿ; ಇಂದೋರ್: ಸೇತುವೆ ಮೇಲೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋವ್ ನಲ್ಲಿ ನಡೆದಿದೆ.
ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಶ್ರೀಖಂಡಿಯಿಂದ ಇಂದೋರ್ ಗೆ ತೆರಳುತ್ತಿತ್ತು. ಈ ವೇಳೆ ಖಾರ್ಗೋವ್ ಬಳಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ