Kannada NewsKarnataka NewsLatest

*ಖಾಸಗಿ ಬಸ್ ಅಪಘಾತ; ನಾಲ್ವರು ಪ್ರಯಾಣಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿ ನಡೆದಿದೆ.

Home add -Advt

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಳಗಿನ ಜಾವ 4:30ರ ಸುಮಾರಿಗೆ ಪಾಘಾತಕ್ಕೀಡಾಗಿದೆ. ಬಸ್ ನಲ್ಲಿ ಸುಮಾರು 50 ಜನರಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಓರ್ವ ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ 38 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button