Kannada NewsKarnataka NewsLatest
*ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್; ಕರೆಂಟ್ ಶಾಕ್ ಗೆ 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, 35ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರದ ಗೆಣಸಿನಕುಣಿ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿದೆ. ಕರೆಂಟ್ ಶಾಕ್ ನಿಂದಾಗಿ ಬಸ್ ನಲ್ಲಿದ್ದ 35ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ತಕ್ಷಣ ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ