
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ.
ಆಸೀಫ್ (45) ಮೃತ ಚಾಲಕ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.
ಬಸ್ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ