ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದು ಪಲಿಯಾಗಿ ಬಿದ್ದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ.
ಖಾಸಗಿ ಬಸ್ ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದ್ದು, ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ್ದಾರೆ . ಮೊಹಮ್ಮದ್ ಇಬ್ರಾಹಿಂ (42) ಮೃತ ಚಾಲಕ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮಂಗಳುರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ