Kannada NewsLatestNational

*ಬಸ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ; ಮಹಿಳೆ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಬಸ್ ಪಲ್ಟಿಯಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರು ಸಜೀವದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದ್ದು, ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

Home add -Advt

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಬಿದ್ದಿದೆ. ಕ್ಷಣಾರ್ಧದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಮಹಿಳಾ ಪ್ರಯಾಣಿಕರೊಬ್ಬರು ಸಜೀವದಹನಗೊಂಡಿದ್ದಾರೆ. ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು, ಬಸ್ ನಲ್ಲಿ 40 ಪ್ರಯಾಣಿಕರು ಇದ್ದರು. ಚಾಲಕ ನಿದ್ದೆ ಮಂಪರಿನಲ್ಲಿ ಬಸ್ ಓಡಿಸಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ದುರಂತ ಸಂಭವಿಸಿದೆ.

Related Articles

Back to top button