
ಪ್ರಗತಿವಾಹಿನಿ ಸುದ್ದಿ;ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ಗೆ ತೆರಳುತುದ್ದ ಖಾಸಗಿ ಬಸ್, ಕವಡಿಮಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರೆಂಜ್ ಟ್ರಾವೆಲ್ಸ್ ಗೆ ಸೇರಿದ ಬಸ್ ಇದಾಗಿದೆ. ಬಸ್ ನಡಿ ಹಲವು ಪ್ರಯಾಣಿಕರು ಸಿಲುಕಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
https://pragati.taskdun.com/siddaramaiahreactionpm-narendra-modisafari/