ಪ್ರಗತಿವಾಹಿನಿ ಸುದ್ದಿ; ಹಾವೇರಿ: ಖಾಸಗಿ ಬಸ್ ಬ್ರಿಡ್ಜ್ ಮೇಲಿಂದ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ದೇವಗಿರಿ ಗ್ರಾಮದ ಬಳಿ ನಡೆದಿದೆ.
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆ ಗೋಕಾಕ್ ಗೆ ತೆರಳುತ್ತಿತ್ತು. ಈ ವೇಳೆ ದೇವರಗಿ ಗ್ರಾಮದ ಬಳಿ ಬಸ್ ತೆರಳುತ್ತಿದ್ದಾಗ ಬ್ರಿಡ್ಜ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದು, 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸ್ ನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕ್ರೇನ್ ಬಳಸಿ ಮೇಲಕ್ಕೆತ್ತಿದ್ದಾರೆ.
ಹಿಜಾಬ್ ವಿವಾದ; ಮುಸ್ಕಾನ್ ಳಿಗೆ ಮಹಾರಾಷ್ಟ್ರ ಶಾಸಕರಿಂದ ಭರ್ಜರಿ ಗಿಫ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ