ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಮನಗೋಳಿ ರಸ್ತೆಯ ಬಳಿ ನಡೆದಿದೆ.
ಖಾಸಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ವಿಜಯಪುರ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ