*ಖಾಸಗಿ ಬಸ್ ಪಲ್ಟಿ; ಚಾಲಕ ಸ್ಥಳದಲ್ಲೇ ದುರ್ಮರಣ; 25 ಪ್ರಯಾಣಿಕರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.Home add -Advt ಗಾಯಾಳುಗಳನ್ನು ಯಲ್ಲಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಬೆಳಗಾವಿ: … Continue reading *ಖಾಸಗಿ ಬಸ್ ಪಲ್ಟಿ; ಚಾಲಕ ಸ್ಥಳದಲ್ಲೇ ದುರ್ಮರಣ; 25 ಪ್ರಯಾಣಿಕರಿಗೆ ಗಾಯ*