Kannada NewsLatest
*ಭೀಕರ ಅಪಘಾತ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಹೆಬ್ಬೂರು ಬಳಿಯ ಬನ್ನಿಮರದಕಟ್ಟೆ ಬಳಿ ನಡೆದಿದೆ.
ತಿರುಮಲೇಗೌಡ (50) ಹಾಗೂ ಮಗಳು ಚಂದನ (20) ಮೃತರು. ತಂದೆ-ಮಗಳು ಗುಬ್ಬಿ ತಾಲೂಕಿನ ನೆಟ್ಟಿಗೆರೆ ಗ್ರಾಮದವರಾಗಿದ್ದು, ಬೆಂಗಳೂರಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ತಂದೆ ತಿರುಮಲೆಗೌಡ ಶಳದಲ್ಲೇ ಸಾವನ್ನಪ್ಪಿದ್ದರೆ ಮಗಳು ಚಂದನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.
ಹೆಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ; ತೀವ್ರ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ*
https://pragati.taskdun.com/ramesh-jarakiholid-k-shivakumaraudiobelagavi/




