ಮೂವರು ಮಕ್ಕಳು ಸೇರಿ ಐವರು ಸಾವು
ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಣ್ಖ್ಯೆ 5ಕ್ಕೆ ಏರಿಕೆಯಾಗಿದೆ, ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರು. ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಇಬ್ಬರೂ ಮೃತಪಟ್ಟಿದ್ದಾರೆ.
ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಆಂಜನೇಯ (35) ಪತ್ನಿ ಗಂಗಮ್ಮ (28), ಮಕ್ಕಳಾದ ಪವಿತ್ರಾ (5), ರಾಯಪ್ಪ (3) ಹಾಗೂ ಒಂದು ವರ್ಷದ ಮಗು ಹನುಮಂತ ಮೃತರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ