ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ ಅಪಘತ ಸಂಭವಿಸಿದೆ. ಸುಳೇಬಾವಿಯ ವಿಠಲ್ ಲೋಕರೆ (29) ಮೃತ ದುರ್ದೈವಿ.
ಬಸ್ ಬೈಕ್ ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ