
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಹೊಡೆದಿದ್ದು, ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬಸ್ ಧಗ ಧಗನೆ ಹೊತ್ತಿ ಉರಿಯಲಾರಂಭಿಸಿದೆ.
ಬೆಂಕಿಯ ಕೆನ್ನಲಿಗೆ ಸುತ್ತಲೂ ವ್ಯಾಪಿಸಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಹಳೆ ಬೈಕ್ ಗಳಿಗೂ ಬೆಂಕಿ ತಗುಲಿ, ಬೈಕ್ ಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಬೈಕ್ ಗಳಲ್ಲಿ ಇಲ್ಲಿ ತಂದು ನಿಲ್ಲಿಸಲಾಗಿತ್ತು. ಈ ಬೈಕ್ ಗಳು ಬೆಂಕಿಗಾಹುತಿಯಾಗಿವೆ.