Kannada NewsKarnataka NewsLatest

*ಭೀಕರ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಅಪಘಾತದಲ್ಲಿ 8 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button