
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇದಲ್ಲಿ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಅಂತ್ಯಕ್ರಿಯೆಗೆ ಎಂದು ಹೋಗುತ್ತಿದ್ದವರು ಮಸಣ ಸೇರಿದ್ದಾರೆ. ಮಂಡ್ಯ ಜಿಲ್ಲೆಯ ತೂಬಿನಕೆರೆ ಎಕ್ಸಿಟ್ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಿಂದಾಗಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದೆ.