Latest

ಮತ್ತೊಂದು ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸೇರಿ ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೇಲೂರು: ಪಾವಗಡ ಬಳಿ ಖಾಸಗಿ ಬಸ್ ಅಪಘಾತ ಘಟನೆ ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ಸಂಕೇನಹಳ್ಳಿಯಲ್ಲಿ ನಡೆದಿದೆ.

ಸಾರಿಗೆ ಬಸ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ ಶಾಲೆಯ ಮಕ್ಕಳು ಎನ್ನಲಾಗಿದೆ. ಬೇಳೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಗೌರವ ಪ್ರದಾನ

Related Articles

Back to top button