ಡಾ.ರಾಜ್ ಕುಟುಂಬದ ಆಪ್ತ ಉದ್ಯಮಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಆಪ್ತನಾಗಿದ್ದ ಉದ್ಯಮಿ ಕಪಾಲಿ ಮೋಹನ್ ಬೆಂಗಳೂರಿನ ಪೀಣ್ಯದ ಬಳಿ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಸಮೀಪದಲ್ಲಿರುವ ತಮ್ಮ ಒಡೆತನದ ಸುಪ್ರೀಂ ಹೋಟೆಲ್‍ನಲ್ಲಿ ಕಪಾಲಿ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಹಿಂದೆ ಸಿಸಿಬಿ ಅಧಿಕಾರಿಗಳು ಆರ್.ಜೆ. ರಾಯಲ್ಸ್ ಹೋಟೆಲ್ ಮತ್ತು ಗ್ಯಾಂಬ್ಲಿಂಗ್ ರೂವಾರಿ ಹಾಗೂ ಮೀಟರ್ ಬಡ್ಡಿ ಆರೋಪದ ಮೇಲೆ ಕಪಾಲಿ ಮೋಹನ್ ಮನೆ ಮೇಲೆ ರೇಡ್ ಮಾಡಿದ್ದರು. ಆಗ ಅಕ್ರಮವಾಗಿ ಸಂಗ್ರಹಿಸಿದ್ದ ವಿದೇಶಿ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಸ್ಥಳಕ್ಕೆ ಬೆಂಗಳೂರಿನ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button