Kannada NewsKarnataka NewsLatest

*ಉದ್ಯಮಿಯೋರ್ವರು ಕಾರಿನಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಉದಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಈ ಗಹ್ಟನೆ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಪತ್ತೆಯಾಗಿದೆ ಶವದ ಮೇಲೆ ಗಾಯದ ಗುರುತುಗಳು ಇವೆ. ದುಷ್ಕರ್ಮಿಗಳು ಕೊಲೆಗೈದು, ಶವವನ್ನು ಕಾರಿನಲ್ಲಿ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿಯಿಂದ ಉದ್ಯಮಿ ಕೃಷ್ಣ ಯಾದವ್ ನಾಪತ್ತೆಯಾಗಿದ್ದರು. ಕೆಲಸಕ್ಕೆಂದು ಹೊರಗೆ ಹೋದವರು ವಾಪಾಸ್ ಆಗಿರಲಿಲ್ಲ. ಆದರೆ ಇಂದು ಬೆಳಿಗ್ಗೆ ತನ್ನದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button