Karnataka News
*ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*

ಪ್ರಗತಿವಾಹಿನಿ ಸುದ್ದಿ: ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು.
ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ