
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ಮುಂಜಾನೆ ಸುಮಾರು 3.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಹಾಗೂ ಮಡಿಕೇರಿ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
20 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಪಿರಿಯಾಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




