*BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ*: *ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ಮುಂಜಾನೆ ಸುಮಾರು 3.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ … Continue reading *BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ*: *ಸ್ಥಳದಲ್ಲೇ ನಾಲ್ವರು ದುರ್ಮರಣ*