
ಪ್ರಗತಿವಾಹಿನಿ ಸುದ್ದಿ; ತುಮಕೂರು: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ದೊಡ್ಡಾಲದ ಮರ ಬಳಿ ನಡೆದಿದೆ.
ವೇಗವಾಗಿ ಬಂದ ಬಸ್, ಲಾರಿಗೆ ಡಿಕ್ಕಿಹೊಡೆದು ಬಳಿಕ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀದಾಗಿದ್ದು, ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ