
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ.
ಲಾರಿ ಚಾಲಕ ವಿನೋದ್ ಕುಮಾರ್ (38) ಹಾಗೂ ಕೊಪ್ಪಳ ಮೂಲದ ಗೀತಾ ಕಲಾಲ್ (40) ಮೃತ ದುರ್ದೈವಿಗಳು. ಬಸ್ ಪ್ರಯಾಣಕರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಲಾರಿ ಚಾಲಕ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಮೃತ ಮಹಿಳೆ ಸಹೋದರಿ ಜೊತೆ ಯಲ್ಲಮ್ಮನ ಗುಡ್ಡಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಈ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ