ಪ್ರಗತಿವಾಹಿನಿ ಸುದ್ದಿ; ವಡೋದರಾ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ಸಂಭವಿಸಿದೆ.
ವಡೋದರಾದ ಕಪುರೈ ಸೇತುವೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಐಷಾರಾಮಿ ಬಸ್, ಟ್ರಕ್ ಹಿಂದಿಕ್ಕಲು ಹೋಗಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಡೋದರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬಿಲ್ವಾರಾದಿಂದ ಮುಂಬೈಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ರಸ್ತೆ ಗುಂಡಿಗೆ ಮತ್ತೊಂದು ಬಲಿ; ಅಪಘಾತಕ್ಕೀಡಾಗಿದ್ದ ಮಹಿಳೆ ಸಾವು
https://pragati.taskdun.com/latest/pathholewoman-deathksrtc-bus-accident/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ