Karnataka NewsLatestNational

*ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್‌ ಹಾಗೂ ಟ್ರಕ್‌ ನಡುವೆ ಸಂಹವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತೆಲಂಗಾಣದ ಸೂರ್ಯಪೇಟೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಬಸ್ ದುರ್ಗಾಪುರಂ ಸ್ಟೇಜ್ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

Home add -Advt

ಬಸ್ ನಲ್ಲಿ ಒಟ್ಟು 43 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಮೃತರ ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಲಾಗಿದೆ.

Related Articles

Back to top button