
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಿ.ವಿ.ಪಾಟೀಲ ಅಧಿಕಾರ ಸ್ವೀಕರಿಸಿದ್ದಾರೆ.
ಕರುಣಾಕರ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ಬಿ.ವಿ.ಪಾಟೀಲ ಅವರ ನೇಮಕವಾಗಿದೆ. ಬಿ.ವಿ.ಪಾಟೀಲ ಈ ಹಿಂದೆ ಬೆಳಗಾವಿಯಲ್ಲಿ ಉಪಅರಣ್ಯ ಸಂರಕ್ಷಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ನಂತರ ಕಾಡಾ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ.