
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಲಮಂಡಳಿಯ ನಿರ್ಲಕ್ಷಕ್ಕೆ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಕಾರ್ತಿಕ್ ಮೃತ ಬಾಲಕ. ಜಲಮಂಡಳಿ ಸಿಬ್ಬಂದಿಗಳು ಕಾಮಗಾರಿಗಾಗಿ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮಗು ಮೃತಪಟ್ಟಿದೆ. ಅಧಿಕಾರಿಗಳ ನಿರ್ಲಕ್ಷವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗು ಸಾವಿಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂಬ ಆರೋಪದಲ್ಲಿ ಇಂಜಿನಿಯರ್ ಹಾಗೂ ಕಾಂಟ್ರ್ಯಾಕ್ಟರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.