Latest

*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: BWSSBಯಲ್ಲಿ ಶೀಘ್ರ ಸಿಬ್ಬಂದಿ ನೇಮಕಾತಿಗೆ ಕ್ರಮ*

ಪ್ರಗತಿವಾಹಿನಿ ಸುದ್ದಿ: ಬಿಡ್ಬ್ಲೂಎಸ್ ಎಸ್ ಬಿಯಲ್ಲಿ ಶೀಘ್ರವೇ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲದೇ ಇರುವ ಕಾರಣದಿಂದಾಗಿ ಹಲವಾರು ವರ್ಷಗಳಿಂದ ಜಲಮಂಡಳಿಯಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಅಧಿವೇಶನ ಮುಗಿದ ನಂತರ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ಕೊಳವೆಬಾವಿಗಳು ಬತ್ತಿ ಹೋಗಿದ್ದವು. ನೀರಿನ ಸಮಸ್ಯೆಯನ್ನು ಬೆಂಗಳೂರು ಜಲಮಂಡಳಿ ಸಿಬ್ಬಂದಿಗಳು ಹಾಗೂ ನೌಕರರು ನಗರದಲ್ಲಿ ಎದುರಾಗಿದ್ದ ಬರಗಾಲವನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿದ್ದೀರಿ ನಿಮ್ಮ ಸೇವೆ ಶ್ಲಾಘನೀಯ ಎಂದರು.

Home add -Advt


Related Articles

Back to top button