Kannada NewsKarnataka NewsLatest
ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ರಾಜ್ಯದ ವಿವಿಧ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿಗೆ ಬಸವನಗೌಡ ತುರವಿಹಾಳ ಅಭ್ಯರ್ಥಿಗಳು. ಸಿಂದಗಿ ಕ್ಷೇತ್ರಕ್ಕೆ ಕೂಡ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ್ದು, ಅಶೋಕ ಮನಗೋಳಿ ಅಭ್ಯರ್ಥಿಯಾಗಲಿದ್ದಾರೆ.
ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿಲ್ಲ. ಶನಿವಾರ ರಾಜ್ಯ ಕಾಂಗ್ರೆಸ್ ಪ್ರಮುಖರ ಸಭೆ ನಡೆಯಲಿದ್ದು ಅಲ್ಲಿ ಚರ್ಚಿಸಿ ಹೈಕಮಾಂಡ್ ಗೆ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಶಾಸಕರು, ಸಂಸದರು, ಮಾಜಿ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬರುವ ಸೋಮವಾರದ ಹೊತ್ತಿಗೆ ಕಾಂಗ್ರೆಸ್ ಹೈಕಮಾಂಡ್ ಬೆಳಗಾವಿ ಅಭ್ಯರ್ಥಿ ಘೋಷಿಸಬಹುದು.
ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ಸತೀಶ್ ಜಾರಕಿಹೊಳಿ
ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ಸತೀಶ್ ಜಾರಕಿಹೊಳಿ


