Politics

*ಉಪಚುನಾವಣೆ ಫಲಿತಾಂಶದ ಮೂಲಕ ವಿಪಕ್ಷಗಳಿಗೆ ಮತದಾರರಿಂದ ಸ್ಪಷ್ಟ ಸಂದೇಶ ರವಾನೆಯಾಗಿದೆ: ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ: ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವಾಗಿದೆ. ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದ ವಿಪಕ್ಷಗಳಿಗೆ ಈ ಮೂಲಕ ಮತದಾರರು ಸ್ಪಷ್ಟ ಉತ್ತರ ನೀಡಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೂರು ಕ್ಷೇತ್ರಗಳ ಮತದಾರರು ಅಭಿವೃದ್ಧಿ ಕಾರ್ಯಗಳಿಗೆ ಮತ ಹಾಕಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ವಿಪಕ್ಷ ನಾಯಕರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ವಿಪಕ್ಷದವರು ಮಾಡುತ್ತಿದ್ದರು. ಇದೀಗ ಚುನಾವಣಾ ಫಲಿತಾಂಶದ ಮೂಲಕ ಸರ್ಕಾರದ ಪರ ಇದ್ದೇವೆ ಎಂಬುದನ್ನು ಮತದಾರರು ಸಂದೇಶ ರವಾನಿಸಿದ್ದಾರೆ ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button