*ರಂಗೇರಿದ ಬೈ-ಎಲೆಕ್ಷ ಅಖಾಡ: ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಘೋಷಣೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; “ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರವೀಂದ್ರ ಕಲಾಕ್ಷೇತ್ರ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.
ಚನ್ನಪಟ್ಟಣ ನಾಯಕ ಸಭೆ ಬಗ್ಗೆ ಕೇಳಿದಾಗ, “ನಾನು ಉಪಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ಈಗಾಗಲೇ ಶಿಗ್ಗಾಂವಿ ನಾಯಕರ ಜತೆ ಚರ್ಚೆ ಮಾಡಿದ್ದು, ಇಂದು ಚನ್ನಪಟ್ಟಣ ತಾಲೂಕಿನ ನಾಯಕರ ಜತೆ ಸಭೆ ಮಾಡುತ್ತಿದ್ದೇನೆ. ಆಮೂಲಕ ಅವರ ಅಭಿಪ್ರಾಯ ಸಂಗ್ರಹಿಸಿ, ಅವರು ಯಾರ ಹೆಸರು ಸೂಚಿಸುತ್ತಾರೆ ಎಂದು ಮಾಹಿತಿ ಪಡೆಯುತ್ತೇನೆ. ಕೆಪಿಸಿಸಿ ಅಧ್ಯಕ್ಷನಾಗಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವುದು ನನ್ನ ಕರ್ತವ್ಯ. ನಾನು ಅದನ್ನು ಮಾಡುತ್ತಿದ್ದೇನೆ.
ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ನಾವು ಎಲ್ಲಾ ನಾಯಕರು ಸೇರಿ ಒಮ್ಮತದ ಅಭ್ಯರ್ಥಿ ಹಾಕಲು ತೀರ್ಮಾನಿಸಿದ್ದೇವೆ. ನಮ್ಮ ಪಕ್ಷದ ನೆಲೆ ಉಳಿಸಿಕೊಳ್ಳಲು ಅಗತ್ಯ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ