*ಉಪಚುನಾವಣೆ: ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು.
ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ಉಪಸ್ಥಿತರಿದ್ದರು. ಇದೇ ವೇಳೆ ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತರು ನಮ್ಮ ಜತೆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




